ಪತ್ರಿಕಾ ದಿನಾಚರಣೆ ನಾಳೆ
Author : Vinayak M Bhat
ಕಲಘಟಗಿ : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ (ರಿ.) ವತಿಯಿಂದ ಪತ್ರಿಕಾ ದಿನಾಚರಣೆಯನ್ನು ನಾಳ ಬೆಳಿಗ್ಗೆ 11.00 ಕ್ಕೆ ಪಟ್ಟಣದ ಜಿ ಇ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ.
ಸಚಿವ ಸಂತೋಷ ಲಾಡ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಘನ ಉಪಸ್ಥಿತಿ ಇರಲಿದೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಂಡು ಕುಲಕರ್ಣಿ ಮುಖ್ಯಅತಿಥಿಗಳಾಗಿ ಆಗಮಿಸಲಿದ್ದಾರೆ. ತಾಲೂಕು ಕಾ ನಿ ಪ ಸಂಘದ ಅಧ್ಯಕ್ಷ ಪ್ರಕಾಶ್ ಲಮಾಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಪ ಮಾಜಿ ಸದಸ್ಯ ನಾಗರಾಜ್ ಛಬ್ಬಿ, ಗ್ಯಾರಂಟಿ ಜಿಲ್ಲಾಧ್ಯಕ್ಷ ಎಸ್ ಆರ್ ಪಾಟೀಲ್, ಕೆಸಿಸಿ ಬ್ಯಾಂಕ್ ನಿರ್ದೇಶಕ ಮಂಜುನಾಥಗೌಡ ಮುರಳ್ಳಿ, ಗುರು ಭಾಂಡಗೆ, ಸಂಸ್ಥೆಯ ಅಧ್ಯಕ್ಷರಾದ ನಂದೀಶ ಪಾಟೀಲ್ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಡಾ ನಾಗರಾಜ್ ಆರ್ ಹಳ್ಳಿಯವರ ಅವರು ಪತ್ರಿಕಾ ದಿನಾಚರಣೆಯ ಅಂಗವಾಗಿ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಜಿಲ್ಲಾ ಅತ್ಯುತ್ತಮ ತನಿಖಾ ವರದಿಗಾರಿಕೆ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಗಿರೀಶ ಮುಕ್ಕಲ್ಲ ಅವರನ್ನು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಗುವುದು. ಜೊತೆಗೆ ಪಟ್ಟಣದಲ್ಲಿ ದಿನಪತ್ರಿಕೆಗಳನ್ನು ವಿತರಿಸುವ ವಿತರಕರನ್ನೂ ಸನ್ಮಾನಿಸಲಾಗುವುದು ಎಂದು ಸಂಘದ ಕಾರ್ಯದರ್ಶಿ ಉದಯ ಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












